ಬೆಂಗಳೂರು: ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದು ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದಿದ್ದ ಮಹಾರಾಷ್ಟ್ರ ಮೂಲದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದ್ದಾರೆ ಮಾಡಿಕೊಂಡಿದ್ದಾರೆ. ಅಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯಅವಿರಾಜ್ ಹನುಮಾನ್ ಪವಾರ್ (23) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಲ್ಲಿ , ಇನ್ಸ್ಟ್ರುಮೆಂಟೇಶನ್ ಅಂಡ್ ಅಪ್ಲೈಡ್ ಫಿಸಿಕ್ಸ್ ವಿಷಯದಲ್ಲಿ ಎಂಟೆಕ್ ಸ್ನಾತಕೋತ್ತರ ಪದವಿ ಮಾಡುತ್ತಿದ್ದರು. ಪ್ರಕರಣ ದಾಖಲಿಸಿರುವ ಸದಾಶಿವನಗರ ಪೊಲೀಸರು ಸಹಪಾಠಿಗಳನ್ನು ವಿಚಾರಣೆ ನಡೆಸಿದ್ದಾರೆ.




