ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಯತ್ನ: ಸತೀಶ್ ಜಾರಕಿಹೊಳಿ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬೆಂಗಳೂರು: ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಹಾಗೂ ಸೇಡಿನ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿದ್ದಾರೆ.
ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಯಾತ್ರೆಯ ಸಮಾರೋಪ ಮೈಸೂರಿನಲ್ಲಿ ನಡೆಯಿತು.
ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿಸಿಎಂ ಡಿ.ಕೆ ಯ.ಶಿವಕುಮಾರ್ ಮಾತನಾಡಿ, ಈ ಸರ್ಕಾರದ ರಕ್ಷಣೆಗಾಗಿ ಜನರ ಆಶೀರ್ವಾದದೊಂದಿಗೆ ಬಂಡೆಯಂತೆ ನಿಂತಿದ್ದೇನೆ. ಇದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಈ ಹಿಂದೆ ಎಸ್ ಎಂ ಕೃಷ್ಣ ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು. ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ಮಾಡಿದ್ದೆವು. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿ ಜನರ ಅಹವಾಲು ಆಲಿಸಿದರು. ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿ ಪ್ರಜಾಪ್ರಭುತ್ವ ಉಳಿಸಿದ್ದರು. ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಶಾಪ ವಿಮೋಚನೆಗಾಗಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದಾರೆ ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಸಿಎಂ ಅವರು ಯಾವುದೇ ಪಾತ್ರ ನಿರ್ವಹಿಸಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರದೇ ಪಕ್ಷದ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರು ನಿವೇಶನ ನೀಡಿದ್ದಾರೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.
ಬಜೆಟ್ ನಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕೂ ಆರ್ಥಿಕ ನೆರವು ನೀಡಿಲ್ಲ. ಈ ಬಗ್ಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಿಗೊಳಿಸಲು ಪಿತೂರಿ ಮಾಡುತ್ತಿದೆ ಎಂದರೂ. ದು
ಇದೇ ವೇಳೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದೆ ಸುಳ್ಳು ಆರೋಪ ಮಾಡಿಕೊಂಡು ತಿರುಗಾಡುತ್ತಿವೆ ಎಂದರು.
ಜನರಿಂದ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಪ್ರಯತ್ನ ಮಾಡಲಾಗುತ್ತದೆ. ಇಂತಹ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. ಇದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಜನಸಮೂಹ ಎಂದರು.




