ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಮುಂಡಾ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿರುವ ಅವರು, ನಮ್ಮ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.
ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ. ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದ್ದಾರೆ.


