ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಹೇಳಿದರು.
ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.
ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ಅಂಕಿತ ಹಾಕುವಂತೆ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಇದರಲ್ಲಿ ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.



