ಮಕ್ಕಳಿಗೆ ಮೊಟ್ಟೆ ನಿರಾಕರಣೆಯಲ್ಲಿ ಮತೀಯ ರಾಜಕಾರಣ: ಎಸ್‌ಎಫ್‌ಐ  

4 years ago

ಬೆಂಗಳೂರು: ಮಕ್ಕಳ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆಯಲ್ಲಿ ಮತೀಯವಾದಿ ರಾಜಕಾರಣ ಮಾಡಲಾಗುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿ ಆರೋಪಿಸಿದೆ.

ಪ್ರತಿ ಮಗುವಿಗೂ ಮೊಟ್ಟೆ ಹಾಗೂ ಪೌಷ್ಟಿಕ ಆಹಾರ ನೀಡುವುದನ್ನು ಸರ್ಕಾರ ಖಾತ್ರಿಗೊಳಿಸಬೇಕು ಎಂದು ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿ ಬೀದರ್‌ನಲ್ಲಿ ಕೆಲ ಸಂಘಟನೆಗಳಿಂದ ಮೊಟ್ಟೆ ವಿತರಣೆ ವಿರೋಧಿಸಿ ಪ್ರತಿಭಟನೆ ನಡೆಸಿ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಲಾಗಿದೆ ಎಂದು ಎಸ್ಎಫ್ಐ ಹೇಳಿದೆ.

ಒಂದು ವೇಳೆ ಇಂತಹ ಮತೀಯವಾದಿ ರಾಜಕಾರಣದ ಕಾರಣಗಳಿಗಾಗಿ ರಾಜ್ಯ ಸರ್ಕಾರ ಮೊಟ್ಟೆ ಆಹಾರವನ್ನು ಮೊಟಕುಗೊಳಿಸಿದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ ಎಂದು ಎಸ್ಎಫ್ಐ ಎಚ್ಚರಿಕೆ ನೀಡಿದೆ.

ಶೈಕ್ಷಣಿಕ ಕ್ಷೇತ್ರದ ನೈಜ ಸಮಸ್ಯೆಗಳನ್ನು ಮರೆಮಾಚಿ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ತಿನ್ನುವ ಆಹಾರದ ವಿಷಯದಲ್ಲಿ ಮತೀಯವಾದಿ ರಾಜಕಾರಣದ ಕ್ಷುಲ್ಲಕ ವಿವಾದಗಳನ್ನು ಸೃಷ್ಟಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣ, ಕೇಂದ್ರೀಕರಣವನ್ನು ತೀವ್ರಗೊಳಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಅಪ್ರಜಾಸತ್ತಾತ್ಮಕವಾಗಿ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೊಳಿಸಿ ಬಡವರು, ತಳ ವರ್ಗದ ಮಕ್ಕಳನ್ನು ಅಕ್ಷರ ಮತ್ತು ಆಹಾರದ ಹಕ್ಕಿನಿಂದ ವಂಚಿಸುವ ವ್ಯವಸ್ಥಿತವಾದ ಹುನ್ನಾರ ಎಂದು ಎಸ್‌ಎಫ್‌ಐ ಆರೋಪಿಸಿದೆ.

Leave a Reply