ಬೆಂಗಳೂರು: ರಾಜ್ಯಪಾಲರು ತರಾತುರಿಯಲ್ಲಿ ಸಿಎಂ Siddaramaiah ಅವರ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಇದಕ್ಕೆ ನನ್ನ ಅಧ್ಯಕ್ಷತೆಯಲ್ಲಿ ನಡೆದ ಕಳೆದ ಸಚಿವ ಸಂಪುಟ ಸಭೆಯಲ್ಲಿ ನಾವು ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ನೀಡಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತನಿಖೆ ಇಲ್ಲದೆಯೇ ಈ ರೀತಿ ಆದೇಶ ಕೊಡುವುದು ತಪ್ಪು. ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.
ಆಗಸ್ಟ್ 31ರಂದು ರಾಜಭವನ ಚಲೋ ನಡೆಸಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು ಎಂದರು.
ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಅವರು ಸಾಚಾ ಕೆಲಸ ಮಾಡುವವರು, ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸ್ ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ SIT ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದರು.
ನಾವೇನೂ ತಿರುಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ SIT ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ ಎಂದು ಹೇಳಿದರು. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು. ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ? ಎಂದು ಪ್ರಶ್ನಿಸಿದರು.
ಸಹಿ ಫೋರ್ಜರಿ ಆಗಿದ್ರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ. ಯಾರೇ ಆಗಿರಲಿ, ಫೋರ್ಜರಿ ಮಾಡಿದವರ ಬಗ್ಗೆ ದೂರು ಕೊಡಬೇಕು. ಈ ಹಿಂದೆ ನಾನು ಕುಮಾರಸ್ವಾಮಿ ಅವರ ಆಸ್ತಿ ವಿವರವನ್ನೆಲ್ಲ ಕೇಳಿದ್ದೆ. ಇವರ ಕೇಸ್ ಗಳು ನಮಗೂ ತಿಳಿದಿದೆ. ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಡೆಯಲಿದೆ ಎಂದರು.



