ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರೇ ಇರುವ ಟ್ರಸ್ಟ್ ಗೆ ನಿಯಮಬಾಹಿರವಾಗಿ ಕೆಐಎಡಿಬಿ ಜಮೀನು ಮಂಜೂರು ಮಾಡಿದ್ದು ಅದನ್ನು ಕೂಡಲೇ ರದ್ದುಪಡಿಸಿ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಹಿರಿಯ ಪುತ್ರ ರಾಹುಲ್ ಖರ್ಗೆ ನೇತೃತ್ವದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಏರೋ ಸ್ಪೇಸ್ ಪಾರ್ಕ್ ನಲ್ಲಿ ಸಿಎ ನಿವೇಶನ ನೀಡಲಾಗಿದೆ. ಇದನ್ನು ಪಡೆದುಕೊಳ್ಳುವಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪ್ರಭಾವ ಬಳಸಿದ್ದು ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.
ದಲಿತರು ಅಂದ್ರೆ ಒಂದೇ ಒಂದು ಕುಟುಂಬ ಅಲ್ಲ. ಅನೇಕ ಕುಟುಂಬಗಳಿವೆ. ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಒಂದು ಕುಟುಂಬದ ಟ್ರಸ್ಟ್ ಆಗಿದೆ. ಇದಕ್ಕೆ ಸಿಎ ನಿವೇಶನ ಕೊಡಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕ್ರಿಯೆಯಲ್ಲಿ ಸೃಜನ ಪಕ್ಷಪಾತ ನಡೆದಿದೆ ಎಂದರು.




