ಬೆಂಗಳೂರು: ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬಾಕಿ ಇರುವ ಹಣವನ್ನು ಈ ಮಾಸಾಂತ್ಯದೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ತಾಂತ್ರಿಕ ಕಾರಣಗಳಿಗಾಗಿ ಹಣ ತಲುಪುತ್ತಿರಲಿಲ್ಲ. ಅದನ್ನು ಸರಿಪಡಿಸಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದರು.
ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. ಬಹುತೇಕ ಅವರಲ್ಲಿ ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರು ಇರಬಹುದು ಅಥವಾ ಯೋಜನೆಯ ಸೌಲಭ್ಯ ತಮಗೆ ಬೇಡ ಎಂದು ನಿರಾಕರಿಸಿರಲೂ ಬಹುದು ಎಂದರು.
ಈಗಲೂ ವೆಬ್ಸೈಟ್ ಮುಕ್ತವಾಗಿದ್ದು, ಆದಾಯ ತೆರಿಗೆ ಜಿಎಸ್ಟಿ ಪಾವತಿ ಮಾಡದೇ ಇರುವವರು ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆಯನ್ನು ನಮೂದಿಸುತ್ತಿದ್ದಂತೆ ಸ್ಪಷ್ಟ ಮಾಹಿತಿಗಳು ಲಭ್ಯವಾಗುತ್ತವೆ ಎಂದರು.




