ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿದೆ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು. ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು www.swachhbharathurban.gov.in/ihhl ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು.




