ಮಹಾನಗರ ಪಾಲಿಕೆಯಿಂದ ಸೂಚನೆ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುತ್ತದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ನಿವೇಶನ ಮಾಲೀಕರು ತಮ್ಮ ಜವಾಬ್ದಾರಿ ಅರಿತು, ನೀರು ನಿಲ್ಲದಂತೆ ಮತ್ತು ಸೊಳ್ಳೆಗಳು ಅಭಿವೃದ್ಧಿಯಾಗದಂತೆ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸೂಚಿಸಲಾಗಿದೆ.
ಒಂದು ವೇಳೆ ಖಾಲಿ ನಿವೇಶನ, ಕಟ್ಟಡ ನಿರ್ಮಾಣ ಹಂತದಲ್ಲಿನ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದರೊಂದಿಗೆ ನಿವೇಶನ ಸ್ವಚ್ಛಗೊಳಿಸಿ ಇದಕ್ಕೆ ತಗುಲುವ ವೆಚ್ಚವನ್ನು ಆಸ್ತಿತೆರಿಗೆ ಬಾಕಿ ರೂಪದಲ್ಲಿ ವಸೂಲು ಮಾಡಲು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.




