ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಸಂವಿಧಾನ ಎಂಬ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಡಾ||ಬಿ.ಆರ್. ಅಂಬೇಡ್ಕರ್ ಯುವಕರ ಸಂಘ ಸಂಸ್ಥಾಪಕ ಅಧ್ಯಕ್ಷ ಎಂ.ಕೃಷ್ಣಪ್ಪ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 150 ಅಡಿ ಎತ್ತರದ ಪ್ರತಿಮೆಯನ್ನು ಬೆಂಗಳೂರು ನಗರದಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನತೆ ಮತ್ತು ಮಹಿಳೆಯರಿಗೆ ಸರಿಸಾಮಾನ ಸ್ಥಾನ, ಎಲ್ಲರು ಸರಿಸಮಾನವಾಗಿ ಬದುಕು ಸಾಗಿಸಲು ಸಂವಿಧಾನ ಸಹಕಾರಿಯಾಗಿದೆ ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆದು ದೇಶಕ್ಕೆ ಕೊಡುಗೆಯಾಗಿ ನೀಡಿದ ಕಾರಣದಿಂದ ದೇಶದಲ್ಲಿ ಎಲ್ಲರು ಸಹೋದರತ್ವ ಮತ್ತು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಅಂಬೇಡ್ಕರ್ ಅವರ ಜೀವನ ಆದರ್ಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.
ತೆಲಂಗಾಣದಲ್ಲಿ ಅಂಬೇಡ್ಕರ್ ಅವರ 120 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗಿದೆ. ರಾಜ್ಯದಲ್ಲಿಯು 150 ಅಡಿ ಉದ್ದದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಅಧ್ಯಕ್ಷೆ ಬೊಮ್ಮಸಂದ್ರ ರೇಣುಕಾ, ಉಪಾಧ್ಯಕ್ಷ ಮಣಿಗಾನಹಳ್ಳಿ ವಿ.ಶ್ರೀನಿವಾಸ, ರಾಜ್ಯ ಪ್ರಧಾನ ಕಾರ್ಯದರ್ಶಿ ಉದಯಕವಿ, ರಾಜ್ಯ ಕಾರ್ಯಾಧ್ಯಕ್ಷ ರವಿಚಂದ್ರ ಎಸ್.ಮೀಸೆ ರಾಮಣ್ಣ, ರಾಜ್ಯ ಮಹಿಳಾ ಗೌರವಾಧ್ಯಕ್ಷ ಸಿ.ಮೀನಾಕ್ಷಿ, ಮುಖಂಡರಾದ ಪಿ.ಮಂಜುನಾಥ್, ಕೊಪ್ಪ ಮುನಿರಾಜಣ್ಣ, ಶೇಕ್ ರಿಜ್ಞಾನ್ ಹಾಜರಿದ್ದರು.




