ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಬಳ್ಳಾರಿ: ದೇಶದ ಯುವಕರನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು, ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ಕರೆತರಲು ರಾಷ್ಟ್ರೀಯ ಕ್ರೀಡಾದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಯುವ ಸಮೂಹ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಕರೆ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಮತ್ತು ಕ್ರೀಡಾ ವಿಜ್ಞಾನ ವಿಭಾಗ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಖೊ-ಖೊ ಪಂದ್ಯಾವಳಿಯನ್ನು ಮೇಜರ್ ಧ್ಯಾನ್ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳು ನಮ್ಮನ್ನು ನಾವು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಾಗಿರುವಂತೆ ಮಾಡುತ್ತವೆ. ನಮ್ಮಲ್ಲಿರುವ ಹಿಂಜರಿಕೆಯನ್ನು ತೊರೆದು, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸ್ಫರ್ಧಾ ಮನೋಭಾವ ತೋರಿಸಬೇಕು ಎಂದರು.
ವಿವಿಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ಕುಮಾರ್ ಮಾತನಾಡಿ, ಸಮಾಜ ವಿಜ್ಞಾನ ನಿಕಾಯದ ವಿಭಾಗಗಳಿಗೆ ಸ್ವಂತ ಕಟ್ಟಡದ ಕೊರತೆಯಿದ್ದು, ಒದಗಿಸಿಕೊಟ್ಟಲ್ಲಿ ನಿಕಾಯದ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕುಲಪತಿಗಳು ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ಆಯೋಜಿಸಿದ್ದ ಖೊ-ಖೊ ಪಂದ್ಯಾವಳಿಯಲ್ಲಿ ವಿಜೇತರಾದ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕುಲಪತಿ ಟ್ರೋಫಿ ವಿತರಿಸಿದರು. ವಿಭಾಗದ ಮುಖ್ಯಸ್ಥ ಡಾ. ಶಶಿಧರ ಕೆಲ್ಲೂರ, ದೈಹಿಕ ಶಿಕ್ಷಣ ಮತ್ತು ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂಪತ್ ಕುಮಾರ, ಅತಿಥಿ ಉಪನ್ಯಾಸಕ ಮಹೇಶ, ರಾಜೇಶ, ವಿದ್ಯಾರ್ಥಿಗಳಾದ ಶಿವಪುತ್ರ, ನಾಗರಾಜ ಸೇರಿದಂತೆ ಸಂಶೋಧನಾ ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.




