ಬಳ್ಳಾರಿ: ರಾಜ್ಯ ಸರ್ಕಾರ 2024-25 ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬಳ್ಳಾರಿ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಗೆ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.
ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ಇದರಿಂದ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಹಾಗಾಗಿ ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬಹುದು.




