ದಾವಣಗೆರೆ: ಅಂಚೆ ಇಲಾಖೆಯಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆ’ಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಂಚೆ ಇಲಾಖೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವುದು ಇದರ ಉದ್ದೇಶವಾಗಿದೆ. 2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ www.indiapost.gov.in ಅಥವಾ www.karnatakapost.gov.in 8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬಹುದು.




