ಬೆಂಗಳೂರು: ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕಳೆದ ವಾರ ನಡೆದಿದ್ದ ಪರೀಕ್ಷೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸಬೇಕು ಎಂಬ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದಿದ್ದಾರೆ.



