ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ರಾಜ್ಯದ ಮುಖ್ಯಮಂತ್ರಿ ಆಗಲು ಸಿದ್ದ ಎಂದು ಹೇಳಿದ್ದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ನಿಲುವು ಬದಲಿಸಿದ್ದಾರೆ.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ತಮ್ಮ ಹೇಳಿಕೆ ರಾಜ್ಯ ಕಾಂಗ್ರೆಸ್ ಮತ್ತು ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಬೆನ್ನಲ್ಲೇ ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.
ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಹ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಎಲ್ಲಾವೂ ಸರಿ ಇದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದ ಮೇಲೆ ಆಸೆ ಪಡಲು ಅವಕಾಶವೇ ಇಲ್ಲ ಎಂದರು.



