ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ ಸೆ. 12 ರವರೆಗೆ ವಿಸ್ತರಿಸಿ ನಗರದ 24ನೇ ಎಸಿಎಂಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ಪ್ರಕರಣದ ಸಂಬಂಧ ಈಗಾಗಲೇ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು 24 ನೇ ಎಸಿಎಂಎಂ ಕೋರ್ಟ್ ಗೆ 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ವರದಿಯಲ್ಲಿ ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೇನು ಮೆಸೇಜ್ ಮಾಡಿದ್ದಾನೆ ಎಂಬುದರ ಕುರಿತು ಮಾಹಿತಿ ಉಲ್ಲೇಖಿಸಲಾಗಿದೆ. ಅಲ್ಲದೆ ರೇಣುಕಾ ಸ್ವಾಮಿಗೆ ಪವಿತ್ರ ಗೌಡ ಚಪ್ಪಲಿಯಿಂದ ಹೊಡೆದಿದ್ದು, ಅಲ್ಲದೆ ಚಪ್ಪಲಿ ಮೇಲೆ ರಕ್ತದ ಕಲೆ ಇದ್ದಿದ್ದು ಹಾಗೂ ದರ್ಶನ್ ಬಟ್ಟೆಯ ಮೇಲು ಕೂಡ ರೇಣುಕಾಸ್ವಾಮಿಯ ಕಲೆ ಇದ್ದಿದ್ದು ಸಿಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ.
ಈ ನಡುವೆ ಶೂ ಕಾಲಿನಲ್ಲಿ ರೇಣುಕಾ ಸ್ವಾಮಿ ಎದೆ ಮೇಲೆ ಕಾಲಿಟ್ಟಿದ್ದಾಗಿ, ಎಡಗಿವಿಯನ್ನು ಹೊಸಕಿದ್ದು ಹಾಗೂ ಮರ್ಮಾಂಗದ ಮೇಲೆ ಕಾಲಿಟ್ಟು ತುಳಿದಿರುವುದನ್ನು ಒಪ್ಪಿಕೊಂಡಿದ್ದಾರೆ.
ದರ್ಶನ್ ಹೇಳಿಕೆಗೆ ಪೂರಕವಾಗಿ ರೇಣುಕಾಸ್ವಾಮಿ ಪಕ್ಕೆಲಬು ಮುರಿದಿತ್ತು. ವೃಷಣಕ್ಕೂ ಹಾನಿಯಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಜತೆಗೆ ರೇಣುಕಾಸ್ವಾಮಿಗೆ ಒಂಟಿ ವೃಷಣವಿರುವ ಸಂಗತಿ ಬೆಳಕಿಗೆ ಬಂದಿದೆ. ಅದನ್ನು ರೇಣುಕಾಸ್ವಾಮಿಯ ತಾಯಿಯೂ ದೃಢಪಡಿಸಿದ್ದಾರೆ. ಹುಟ್ಟಿನಿಂದಲೇ ಒಂಟಿ ವೃಷಣ ವೈಫಲ್ಯದಿಂದ ರೇಣುಕಾಸ್ವಾಮಿ ಜನಿಸಿರುವುದು ಸೇರಿ ತನಿಖಾಧಿಕಾರಿಗಳು ಎಲ್ಲವನ್ನೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.




