ಮೂರೂ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಕುಟುಂಬ ಬಲಿ

4 years ago

ಚೆನ್ನೈ: ಮೂರು ಸೇನಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್, ಅವರ ಮಡದಿ ಹಾಗೂ ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು 13 ಜನ ಬಲಿಯಾಗಿದ್ದಾರೆ.

ಅಪಘಾತದ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲು ಯತ್ನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕಾಲವಶರಾಗಿದ್ದಾರೆ.

ಅಪಘಾತಕ್ಕೀಡಾದ ಎಂಐ-17 ವಿ 5 ಹೆಲಿಕಾಪ್ಟರ್ ಘಟನೆ ಕುರಿತು ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ, ಬಿಪಿನ್ ರಾವತ್ ಮತ್ತು ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದಿದೆ.  ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಇತರ ನಾಯಕರು ಸಾವಿಗೆ ಸಂತಾಪ ಮಿಡಿದಿದ್ದಾರೆ.

Leave a Reply