ಮೈಸೂರು: ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತೀಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಬಂದಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಕ್ರಮಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ, ಪ್ರತಾಪ್ ಸಿಂಹ ಅವರು ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಅಂದು ಅದು ಸಾಧ್ಯವಾಗಲಿಲ್ಲ. ಈಗ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ ಎಂದರು.
ಚಾಮುಂಡೇಶ್ವರಿ ಪ್ರಾಧಿಕಾರ ರಚನೆಗೆ ಮೈಸೂರು ರಾಜ ಮನೆತನ ಮತ್ತು ಮೈಸೂರಿನ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಒಡೆಯರ್ ಅಪಸ್ವರ ಎತ್ತಿರುವ ಬೆನ್ನಲ್ಲೇ ಪ್ರತಾಪ ಸಿಂಹ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಚಾಮುಂಡೇಶ್ವರಿ ಬೆಟ್ಟದಲ್ಲಿನ ಆಸ್ತಿ ಹೊಡೆದಾಟದ ಬಗ್ಗೆ ತಾವು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದರು.




