ಬೆಂಗಳೂರು: ನಿಗದಿತ ಅವಧಿ ಒಳಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ ನಡೆಸದಿರುವ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅವಧಿ ಪೂರ್ಣಗೊಂಡರೂ ಚುನಾವಣೆ ಪ್ರಕ್ರಿಯೆ ಆರಂಭಿಸದ ಸಂಘದ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಹಕಾರ ಇಲಾಖೆ ಸೂಚನೆ ನೀಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹಾಲಿ ಚುನಾಯಿತ ಮಂಡಳಿಯ ಅವಧಿ ಪೂರ್ಣಗೊಂಡಿದ್ದರು ನೂತನ ಮಂಡಳಿ ಆಯ್ಕೆಗೆ ಅಗತ್ಯವಿರುವ ಮತದಾರರ ಪಟ್ಟಿ ಪರಿಷ್ಕರಣೆಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಹಕಾರ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯ ನಿಬಂಧಕರು ಸಹಕಾರ ಇಲಾಖೆಯ ಆಡಳಿತ ಅಧಿಕಾರಿ ಚಂದ್ರಶೇಖರ್ ಅವರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನೀಡಿ ಮಾಡಿ ನೀಡುವಂತೆ ಸೂಚಿಸಿದ್ದಾರೆ.
ಸರ್ಕಾರಿ ನೌಕರರ ಸಂಘದ ಚುನಾಯಿತ ಮಂಡಳಿಯ ಆಡಳಿತ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ಆಯ್ಕೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತಂತೆಯೂ ವರದಿ ನೀಡುವಂತೆ ಸೂಚಿಸಲಾಗಿದೆ.




