ಬೆಂಗಳೂರು: ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22 ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಅದೇ ದಿನ ಕೇಂದ್ರ ಲೋಕಸೇವಾ ಆಯೋಗದ ನೇಮಕ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ಸೆಪ್ಟೆಂಬರ್ 22ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತದೆ ಎಂದರು.
ಈಗಾಗಲೇ 545 ಮೊದಲ ಹಂತದ ಪಿಎಸ್ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆ. ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜೊತೆ ಚರ್ಚೆ ನಡೆಸಿದಾಗ ಡಿಸೆಂಬರ್ವರೆಗೂ ಯಾವುದೇ ಸ್ಲಾಟ್ಗಳು ಖಾಲಿ ಇಲ್ಲ ಎಂದು ತಿಳಿಸಲಾಗಿತ್ತು. ಮತ್ತೆ ಹಿರಿಯ ಅಧಿಕಾರಿಗಳು ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಸಹಕಾರ ಬೇಕಿದೆ. ಪ್ರತಿ ಭಾನುವಾರವೂ ಡಿಸೆಂಬರ್ವರೆಗೂ ಪರೀಕ್ಷೆಗಳು ನಿಗದಿಯಾಗಿವೆ ಎಂದರು.
ಸಚಿವರ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೆ.28ಕ್ಕೆ 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿಗದಿ ಮಾಡಲಾಗಿದೆ. ಅಂದು ಶನಿವಾರವಾಗಿದ್ದು, ಪಿಯುಸಿ ತರಗತಿಗಳನ್ನು ರದ್ದುಗೊಳಿಸಲು ಮನವಿ ಮಾಡಲಾಗಿದೆ ಎಂದರು.
ಪೊಲೀಸ್ ಕಾನ್ಸ್ ಟೇಬಲ್ಗಳ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪದ್ಧತಿಗಳು ಹಾಗೂ ಕ್ರಮಗಳ ಮಾಹಿತಿಗಳನ್ನು ಕಲೆ ಹಾಕಿದ್ದೇವೆ. ಪೊಲೀಸ್ ಮಹಾನಿರ್ದೇಶಕರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.




