ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

2 years ago

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅವಕಾಶ

ದಾವಣಗೆರೆ: ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮಾನಾಂತರ,  ಸಾಮಾನ್ಯ ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಮತ್ತು  ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,  ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರ ವರೆಗೆ  ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Leave a Reply