ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಭಾರತೀಯ ರೈಲ್ವೆಯಲ್ಲಿ ಕ್ರಾಂತಿ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ಆರತಿ ಮಸಾಲಾ ಉದ್ಘಾಟನೆಯನ್ನು ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ.ಸೋಮಣ್ಣ, ಸಂಸದ ತೇಜಸ್ವಿಸೂರ್ಯ, ರಾಜ್ಯ ಬಿಜೆಪಿ ಮುಖಂಡ ಡಾ.ಅರುಣ್ ಸೋಮಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ವೇಳೆ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡ, ಮಹಿಳಾ ಅಧ್ಯಕ್ಷೆ, ಮಾಲಿಕರಾದ ರತ್ನಮ್ಮ ಉಪಸ್ಥಿತರಿದ್ದರು.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ವಿ.ಸೋಮಣ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿರವರು ಆತ್ಮನಿರ್ಭರ ಭಾರತ ಎಂದು ಕರೆ ನೀಡಿದ ಪರಿಣಾಮ ಇಂದು ಎಲ್ಲ ಅಗತ್ಯ ವಸ್ತುಗಳು ಸ್ವದೇಶದಲ್ಲಿ ತಯಾರುಗುತ್ತಿವೆ. ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬಿ ಜೀವನಕ್ಕೆ ಮುದ್ರಾ ಯೋಜನೆ, ಜನಧನ್ ಯೋಜನೆ ಸಹಕಾರಿಯಾಗಿದೆ. ಕೋಟ್ಯಂತರ ಮಹಿಳೆಯರು ಈ ಯೋಜನೆಯ ಲಾಭದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಿ ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದರು.
ರೈಲ್ವೆ ಇಲಾಖೆಯಲ್ಲಿ 12 ಲಕ್ಷ ಉದ್ಯೋಗಿಗಳು ಹಗಲಿರುಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಾರಿ ರೈಲ್ವೆ ಪರೀಕ್ಷೆಯನ್ನು ಮಾತೃಭಾಷೆ ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ. 10 ವರ್ಷಗಳ ಹಿಂದೆ ರೈಲುಗಳಲ್ಲಿ ಪ್ರಯಾಣ ಮಾಡಲು ಸಾರ್ವಜನಿಕರು ಇಷ್ಟಪಡುತ್ತಿರಲಿಲ್ಲ. ಸ್ವಚ್ಛತೆ ಇಲ್ಲದೇ ಇಲಿ, ಹೆಗ್ಗಣಗಳ ಕಾಟವಾಗಿತ್ತು ಎಂದರು.
ಪ್ರಧಾನಿ ನರೇಂದ್ರಮೋದಿರವರ ಇಚ್ಛಾಶಕ್ತಿಯಿಂದ ರೈಲ್ವೆ ಇಲಾಖೆಯಲ್ಲಿ ಮಹತ್ವವಾದ ಬೆಳವಣಿಗೆಯಾಗಿದೆ. ಇಂದು ಹೈಟೆಕ್ ರೈಲುಗಳು ಇಂದು ದೇಶಾದ್ಯಂತ ಸಂಚಾರ ಮಾಡುತ್ತಿವೆ ಎಂದರು.
ಬಿಬಿಎಂಪಿ ಮಾಜಿ ಸದಸ್ಯ ದಾಸೇಗೌಡ, ಬಿಜೆಪಿ ಮುಖಂಡರಾದ ಕ್ರಾಂತಿರಾಜು, ಡೊಡ್ಡವೀರಯ್ಯ, ಲೋಕನಾಥ್, ಲಕ್ಷ್ಮಣಗೌಡ, ಪರಮೇಶ್ ಮತ್ತು ಬಿಜೆಪಿ ಮಹಿಳಾ ಮುಖಂಡರು ಹಾಜರಿದ್ದರು.








