ಬಳ್ಳಾರಿ: ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಹನುಮೇಶ್ ವೈದ್ಯ ಅವರು ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ವಿವಿಯ ಮೂವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಪಟ್ಟಿ ಬಿಡುಗಡೆ ಮಾಡುತ್ತದೆ.
ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸ್ವೀಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2 ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬಂಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಿದೆ.
ಮೂವರು ಪ್ರಾಧ್ಯಾಪಕರ ಸಾಧನೆಗೆ ಬಳ್ಳಾರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ, ವಿಶ್ರೀಕೃವಿವಿ ಕುಲಸಚಿವ ರುದ್ರೇಶ್.ಎಸ್.ಎನ್., ಪ್ರಾಧ್ಯಾಪಕರು, ಸಿಬ್ಬಂದಿ, ಕುಟುಂಬ ವರ್ಗ ಅಭಿನಂದಿಸಿದ್ದಾರೆ.




