ಕಾರ್ಮಿಕರು ದೇಶದ ಅಭಿವೃದ್ದಿಯ ಆಧಾರಸ್ತಂಭ
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಮ.ಕರೆಣ್ಣವರ್ ಹೇಳಿಕೆ
ದಾವಣಗೆರೆ: ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭವಾಗಿದ್ದು ಇವರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಇದಕ್ಕಾಗಿ ಕಾರ್ಮಿಕ ವರ್ಗ ನೆಮ್ಮದಿಯಾಗಿರಲೆಂದು ಸರ್ಕಾರ ಅವರ ಅಭಿವೃದ್ದಿಗಾಗಿ ಅನೇಕ ಯೋಜನೆಗಳು, ಸೌಲಭ್ಯಗಳನ್ನು ಜಾರಿಗೊಳಿಸಿದ್ದು ಇವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣವರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ದಾವಣಗೆರೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾದ ದಾವಣಗೆರೆ ಜಿಲ್ಲೆಯ ಉದ್ಯೋಗದಾತರಿಗೆ, ಹೊರಗುತ್ತಿಗೆ ಏಜನ್ಸಿಗಳು, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಕಾನೂನುಗಳು ಮತ್ತು ಅನುಷ್ಟಾನ ಮಾಡುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸಲು ಏರ್ಪಡಿಸಲಾದಡ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರೆಂಬ ಯಂತ್ರದಿಂದ ಸಮಾಜ ಸುಮಗವಾಗಿ ನಡೆದುಕೊಂಡು ಹೋಗುತ್ತಿದೆ, ಒಂದು ಪಕ್ಷ ಕಾರ್ಮಿಕ ಯಂತ್ರ ಸರಿಯಾಗಿ ಕಾರ್ಯ ನಿರ್ವಹಿಸದೇ ಹೋದರೆ ಅನೇಕ ರೀತಿಯಲ್ಲಿ ತೊಂದರೆ ಎದುರಾಗುತ್ತದೆ. ಆದ್ದರಿಂದ ಕಾರ್ಮಿಕ ವರ್ಗದವರ ಜೀವನ ಮಟ್ಟ ಉತ್ತಮವಾಗಿರಲೆಂದು ಸರ್ಕಾರ ಹಲವಾರು ಯೋಜನೆಗಳನ್ನು ಅವರಿಗಾಗಿ ನೀಡಿದೆ. ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ ಮಾಡಿಕೊಟ್ಟು, ಕಾರ್ಮಿಕ ಇಲಾಖೆ ಅವರಿಗೆ ಸಹಕಾರ ನೀಡಲು ಸಜ್ಜಾಗಿದೆ, ಕಾರ್ಮಿಕರು ಇದರ ಫಲ ಪಡೆಯಬೇಕು ಎಂದರು.
ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ಕಾರ್ಮಿಕ ಇಲಾಖೆಯಿಂದ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು, ಕಾರ್ಮಿಕರು ತಮ್ಮಗಳ ಕುಟುಂಬದ ಜವಾಬ್ದಾರಿ ವ್ಯಕ್ತಿಗಳಾಗಿರುವ ನೀವು ಜಾಗೃತರಾಗಿ ಇತರರಿಗೂ ಮಾಹಿತಿ ತಿಳಿಸಬೇಕು. ತಮಗೆ ಅನ್ವಯವಾಗುವ ಯೋಜನೆಗಳಿಗೆ ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕು, ಸುಳ್ಳು ನೋಂದಣಿಗಳು ಕಂಡು ಬಂದಲ್ಲಿ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಕಾರ್ಯಾಗಾರದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಕಾರ್ಮಿಕ ಇಲಾಖೆ ಸೇರಿದಂತೆ ಸರ್ಕಾರದಿಂದ ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳು, ಕಾನೂನುಗಳ ಕುರಿತು ಮಾಹಿತಿ ನೀಡಲಿದ್ದಾರೆ. ಎಲ್ಲ ಕಾರ್ಮಿಕರು ಸವಿವರವಾಗಿ ಮಾಹಿತಿ ಪಡೆದುಕೊಂಡು ಸದುಪಯೋಗ ಮಾಡಿಕೋಳ್ಳಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣ್ಕುಮಾರ್ ಎಲ್.ಎಚ್ ಮಾತನಾಡಿ, ಈ ಕಾರ್ಯಾಗಾರವು ಪರಿಣಾಮಕಾರಿಯಾಗಿ ಅನುಷ್ಠಾಠನ ಆಗಬೇಕಾದರೆ ಕಾರ್ಮಿಕ ಹಾಗೂ ವಿವಿಧ ಸಂಘಟನೆಗಳ, ಹಕ್ಕುಗಳು ಪರವಾಗಿ ಹೋರಾಟ ಮಾಡುತ್ತಿರುವ ಮುಖಂಡರಿಗೆ ಕಾನೂನು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ಇರುವುದು ಬಹಳ ಮುಖ್ಯವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ರಾಜಗೋಪಾಲ್ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಅಧಿಕಾರಿಯಾದ ಮಂಜಪ್ಪ ಬಾಲ ಕಾರ್ಮಿಕ ಕಾಯ್ದೆ ಸೇರಿದಂತೆ ಕಾರ್ಮಿಕರಿಗೆ ದೊರೆಯುವ ಸೌಲಭ್ಯ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಕಾರ್ಮಿಕ ಸಹಾಯಕ ಆಯುಕ್ತರಾದ ಡಾ. ಅವಿನಾಶ್ ನಾಯ್ಕ, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್, ಜಿಲ್ಲಾ ಬಾಲ ಕಾರ್ಮಿಕ ಯೊಜನಾ ನಿರ್ದೇಶಕರಾದ ಪ್ರಸನ್ನಕುಮಾರ್ ಇ.ಎನ್, ಕಾರ್ಮಿಕ ಸಂಘದ ಮಾಲೀಕರ, ಅಧ್ಯಕ್ಷರು, ಸಂಘಟಿತ ಮತ್ತು ಅಸಂಘಟಿತ ಪದಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.




