ಕಾರವಾರ: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಮಾರಕಾಸ್ತ್ರಗಳಿಂದ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದುರ್ಘಟನೆ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನಲ್ಲಿ ನಡೆದಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೃತರನ್ನು ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂದು ಗುರುತಿಸಲಾಗಿದೆ. ಇವರ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವರ ಪತ್ನಿಗೂ ಗಂಭೀರ ಗಾಯಗಳಾಗಿದ್ದು ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಮಾಡಿದ್ದು ಯಾರು, ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದಿಲ್ಲ.
ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಕಳೆದ ವಾರ ಪತ್ನಿಯೊಂದಿಗೆ ಗ್ರಾಮ ದೇವತೆ ಜಾತ್ರೆಗೆ ಹಣಕೊಣ ಗ್ರಾಮಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ದಾರೆ ಮತ್ತು ಯಾಕೆ ಮಾಡಿದರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟದಲ್ಲಿ ತೊಡಗಿರುವ ಉದ್ಯಮಿ ವಿನಾಯಕ ನಾಯ್ಕ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು. ಮರಳಿ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಆರಂಭಿಸಿದ್ದಾರೆ.




