ಬೆಂಗಳೂರು: ಅತ್ಯಾಚಾರ, ಹನಿಟ್ರ್ಯಾಪ್ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸಿಐಡಿಯ ವಿಶೇಷ ತನಿಖಾ ದಳ (ಎಸ್ಐಟಿ) ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ಆರಂಭಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಬಂಧಿತ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇದಕ್ಕೂ ಮೊದಲು ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಪ್ರಕರಣಗಳೂ ಸೇರಿ ಒಟ್ಟು ಮೂರು ಪ್ರಕರಣಗಳ ತನಿಖೆ ನಡೆಸಲು ಸರ್ಕಾರ ಎಸ್ಐಟಿ ರಚಿಸಿದ್ದು, ಪ್ರಕರಣ ಸಂಬಂಧದ ಎಲ್ಲ ಕೇಸ್ ಗಳ ಕಡತಗಳ ಪರಿಶೀಲನೆ ನಡೆಸಲಾಗಿದೆ. ಎಸ್ ಐಟಿಯಲ್ಲಿರುವ ಬಿ ಕೆ ಸಿಂಗ್ ಅವರಲ್ಲದೇ ಐಜಿಪಿ ಲಾಭುರಾಮ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮನವಿ ಮಾಡಿ ಬಾಡಿ ವಾರಂಟ್ ಮೇಲೆ ಆರೋಪಿ ಮುನಿರತ್ನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆರೋಪಿಯ ಪ್ರಾಥಮಿಕ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನ್ಯಾಯಾಧೀಶರ ಎದುರು ಸಿಆರ್ಪಿಸಿ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲು ಮಾಡಲಾಗಿದೆ. ನ್ಯಾಯಾಲಯ ಆರೋಪಿಯನ್ನು ತಮ್ಮ ವಶಕ್ಕೆ ನೀಡಿದರೆ ಸ್ಥಳ ಮಹಜರು ನಡೆಸಿ, ಹೇಳಿಕೆಯನ್ನು ವಿಡಿಯೊ ರೆಕಾರ್ಡ್ ಮಾಡಿಕೊಳ್ಳಲಾಗುವುದು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಕಗ್ಗಲೀಪುರ ಠಾಣೆಯಲ್ಲಿ ಸಂತ್ರರು ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದ್ದು, ಆರೋಪಿ ಕಡೆಯವರು ಸಂತ್ರಸ್ತೆ ಹಾಗೂ ಅವರ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತರ ಕಡೆಯವರು ಯಶವಂತಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.




