ಬೆಂಗಳೂರು: ಕುಮಾರಸ್ವಾಮಿಯವರಂತೆ ವೈಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಡಿ ನೋಟಿಫಿಕೇಷನ್ ಮಾಡಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿಯಾಗಿತ್ತು ಎಂದು ಈ ಹಿಂದೆ ಕೃಷ್ಣ ಬೈರೇಗೌಡ ಆರೋಪಿಸಿದ್ದರು. ಈ ಪ್ರಕರಣವನ್ನು ಉಲ್ಲೇಖಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು ಜರಿದಿದ್ದರು.
ಕುಮಾರಸ್ವಾಮಿಯವರ ನಿಂದನೆಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ರಾಜಕಾರಣದಲ್ಲಿ ವೈಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಯವರಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ನಾವು ಅಂತಹ ಸಂಸ್ಕೃತಿಗೆ ಎಂದಿಗೂ ಜೋತು ಬೀಳುವುದಿಲ್ಲ. ಅಲ್ಲದೆ, ಇಂತಹ ನಿಂದನೆಗಳು ವೈಯಕ್ತಿಕ ದಾಳಿಗಳಿಗೆ ನಾವು ಬಗ್ಗುವವರೂ ಅಲ್ಲ ಎಂದರು.
ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡದ್ದು ಸುಳ್ಳೇ? ಅಂತಿಮವಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿಯವರ ಸ್ಪಷ್ಟನೆ ನೀಡಲಿ ಸಾಕು ಎಂದು ಸವಾಲೆಸೆದರು.




