ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾನೂನು ತಜ್ಞರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ಮೂಲಕ ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾದಂತೆ ಎಐಸಿಸಿ ಅಧ್ಯಕ್ಷರಿಗೂ ಸಮಸ್ಯೆ ಎದುರಾಗಲಿದೆಯಾ ಎಂಬ ಅನುಮಾನ ಮೂಡಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಮಲ್ಲಿಕಾರ್ಜುನ ಖರ್ಗೆ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿದ್ದ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಷ ಮಾಹಿತಿಯೊಂದಿಗೆ ಅಭಿಪ್ರಾಯ ನೀಡುವಂತೆ ಸೂಚಿಸಿದ್ದಾರೆ.
ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದಾರೆ.
ಪ್ರಕರಣದಲ್ಲಿ ಇಬ್ಬರು ಸಚಿವರಿಗೆ ಕಂಟಕ ಸಾಧ್ಯತೆ: ರಾಜ್ಯಪಾಲರು ತಜ್ಞರ ಅಭಿಪ್ರಾಯ ಪರಿಶೀಲಿಸಿ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ನಿಯಮ ಲೋಪ ಆಧರಿಸಿ ರಾಜ್ಯಪಾಲರಿಂದ ತನಿಖೆಗೆ ಆದೇಶವಾದರೆ ಇಬ್ಬರೂ ಸಂಕಷ್ಟಕ್ಕೆ ಸಿಲುಕಲಿದ್ದಾರೆ.
ಒಂದು ವೇಳೆ ಪ್ರಿಯಾಂಕ್ ಖರ್ಗೆ ಹಾಗೂ ಎಂ ಬಿ ಪಾಟೀಲ್ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದಲ್ಲಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಸಂಘರ್ಷ ಮತ್ತಷ್ಟು ತಾರಕಕ್ಕೆ ಏರಲಿದೆ.
ಈಗಾಗಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ವಿಶ್ವವಿದ್ಯಾಲಯಗಳಿಗೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೀಗ ಮತ್ತೊಂದು ಸುತ್ತಿನ ಕದನಕ್ಕೆ ಅಖಾಡ ಸಿದ್ಧವಾಗತೊಡಗಿದಂತಿದೆ.



