ಕೊನೆಗೂ ಎಲೆಕ್ಟ್ರಾನಿಕ್ ಸಿಟಿ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಕಡೆಗೂ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಎಲೆಕ್ಟ್ರಾನಿಕ್ ಸಿಟಿ ಬಳಿಯ ಐಟಿಐ ಗ್ರೌಂಡ್ ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಒಂದು ವಾರದಿಂದ ಮೈದಾನದಲ್ಲಿ ಚಿರತೆ ಸುತ್ತಾಡಿಕೊಂಡಿತ್ತು. ಹಲವು ಬಾರಿ ಬೋನ್ ಬಳಿ ಬರುತ್ತಿದ್ದ ಚಿರತೆ ಬೋನ್ ಒಳಗೆ ಹೋಗುತ್ತಿರಲಿಲ್ಲ.
ಕನಕಪುರದಿಂದ ವಿಶೇಷ ಬೋನ್ ತರಿಸಿ ಕಾರ್ಯಾಚರಣೆ ನಡೆಸಲಾಯಿತು. ನಿನ್ನೆ ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ವಿಶೇಷ ಬೋನ್ ನಲ್ಲಿ ಎರಡು ಕೋಳಿಗಳನ್ನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಅರಣ್ಯ ಇಲಾಖೆ ಅಳವಡಿಸಿದ್ದ ಟ್ರಾಪ್ ಕ್ಯಾಮರಾದಲ್ಲಿ ಹಲವು ಬಾರಿ ಕಾಣಿಸಿಕೊಂಡಿದ್ದ ಚಿರತೆ ತಲೆನೋವಾಗಿ ಪರಿಣಮಿಸಿತ್ತು. ಸೆರೆಯಾದ ಸದರಿ ಚಿರತೆ ನಾಲ್ಕರಿಂದ ಐದು ವರ್ಷ ವಯಸ್ಸು ಆಗಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಬನ್ನೇರುಘಟ್ಟ ಕಾಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಬನ್ನೇರುಘಟ್ಟ ಕಾಡಿನಿಂದ ತಪ್ಪಿಸಿಕೊಂಡು ಬಂದು ಗೊಟ್ಟಿಗೆರೆ ನೈಸ್ ರೋಡ್ ಮೂಲಕ ಎಲೆಕ್ಟ್ರಾನಿಕ್ ಸಿಟಿ ಸೇರಿರುವ ಸಾಧ್ಯತೆ ಇದೆ.
ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದು ಇಂದು ಬೆಳಗ್ಗೆ ಏಳು ಮೂವತ್ತರ ಸಮಯಕ್ಕೆ ಬನ್ನೇರುಘಟ್ಟ ಅರಣ್ಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಚಿರತೆ ಆರೋಗ್ಯವಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.




