ಬೆಂಗಳೂರು/ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲಕ್ಷಾಂತರ ರೂ.ಗಳ ಹಣದ ವಹಿವಾಟು ನಡೆದಿರುವ ಹಿನ್ನಲೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ನನ್ನು ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ಇದರಿಂದ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ತೆರಳಿ ದರ್ಶನ್ ವಿಚಾರಣೆ ಮಾಡಲಿದ್ದಾರೆ. ಐಟಿ ಅಧಿಕಾರಿಗಳ ವಿಚಾರಣೆಗೆ ಸಹಕಾರ ನೀಡುವಂತೆ ನ್ಯಾಯಾಲಯದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇ-ಮೇಲ್ ರವಾನಿಸಲಾಗಿದೆ.
ಕೊಲೆ ಆರೋಪ ಮತ್ತೊಬ್ಬರ ಮೇಲೆ ಹೊರಿಸಲು ದರ್ಶನ್ ಸಂಚು ಮಾಡಿದ್ದರು. ಇದಕ್ಕಾಗಿ ಲಕ್ಷ ಲಕ್ಷ ಹಣ ಖರ್ಚು ಮಾಡಿದ್ದರು. ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ದರ್ಶನ್ ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದರ ವಿಚಾರಣೆ ಸೆಪ್ಟೆಂಬರ್ 27ರಂದು ಕೋರ್ಟ್ನಲ್ಲಿ ನಡೆಯಲಿದೆ. ಈ ಪ್ರಕರಣದಲ್ಲಿ ಅವರು ಜಾಮೀನು ನಿರೀಕ್ಷೆಯಲ್ಲಿ ಇರುವಾಗಲೇ ಮತ್ತೊಂದು ಆಘಾತ ಎದುರಾಗಿದೆ. ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ಅವರು ಉತ್ತರ ನೀಡಬೇಕಿದೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಅವರು ನಂತರ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಅನಂತರ ಸೆರಮನೆಯಲ್ಲಿ ಸಾಮಾನ್ಯ ಕೈದಿಗಳಿಗಿಂತ ವಿಶೇಷ ಸೌಕರ್ಯಗಳು ಸಿಗುತ್ತಿವೆ ಮತ್ತು ಇತರ ಕಾರಣದಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಕಳಿಸಲಾಗಿದೆ.




