ಪ್ರಧಾನಿ ನೇಂದ್ರಮೋದಿ ವಿರುದ್ಧ ವಿನೂತನ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸುಳ್ಳು ಆರೋಪ
ಬೆಂಗಳೂರು: ಹರಿಯಾಣ ಚುನಾವಣೆ ಪ್ರಚಾರ ವೇಳೆ ರಾಜ್ಯದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಭವನದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಆನಂದ್, ಪುಟ್ಟರಾಜು, ಪ್ರಕಾಶ್, ಚಂದ್ರಶೇಖರ್, ಹೇಮರಾಜು, ಉಮೇಶ್, ರವಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ ಮಾತಾಡಿದ ಎಸ್.ಮನೋಹರ್, ಪ್ರಧಾನಿ ನರೇಂದ್ರಮೋದಿಯವರು ಭ್ರಷ್ಟಚಾರಿಗಳು, ಅತ್ಯಾಚಾರಿಗಳು, ಭೂಹಗರಣದಲ್ಲಿ ಸಿಲುಕಿರುವ ಬಿಜೆಪಿ, ಜೆಡಿಎಸ್ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಬಿ.ವೈ.ವಿಜಯೇಂದ್ರ, ಪ್ರಜ್ವಲ್ ರೇವಣ್ಣನಂತಹವರ ಜೊತೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ ಎಂದರು.
ಮೋದಿಯವರ ಇಂತಹ ನಡೆ ಇಡೀ ರಾಷ್ಟ್ರದ ಜನ ತಲೆತಗ್ಗಿಸುವ ವಿಚಾರವಾಗಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಉರುಳಿಸಲು ಕೇಂದ್ರ ಬಿಜೆಪಿ ಸರ್ಕಾರ ಪ್ರಯತ್ನ ಮಾಡುತ್ತಿದೆ. ಹಲವಾರು ರಾಜ್ಯಗಳಲ್ಲಿ ಅಪರೇಷನ್ ಕಮಲ ಮೂಲಕ ರಾಜ್ಯ ಸರ್ಕಾರವನ್ನು ಉರುಳಿಸಿದ ಅಪಕೀರ್ತಿ ಇದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಅನ್ನರಾಮಯ್ಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಕ್ಷೇತ್ರದಲ್ಲಿ ಇದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ದ ಸುಳ್ಳು ಆರೋಪ ಮಾಡಿರುವ ಪ್ರಧಾನಿ ನರೇಂದ್ರಮೋದಿಯವರು ಕೂಡಲೆ ರಾಷ್ಟ್ರ ಮತ್ತು ಜನತೆಯ ಮುಂದೆ ಕ್ಷಮೆ ಹೇಳಬೇಕು ಎಂದು ಒತ್ತಾಯಿಸಿದರು.




