ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೇರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿರ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 7.10 ಹೆಕ್ಟೇರ್ ಗುರಿ ಇದೆ.
ಸಾಮಾನ್ಯ 03, ಮಹಿಳೆ 02 ಮತ್ತು ಪರಿಶಿಷ್ಟ ಪಂಗಡ 2.10 ಹೆಕ್ಟೇರ್, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 01 ಗುರಿ ಹಾಗೂ ಹೊಸದಾದ ಮೀನು ಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 01 ಗುರಿ ನೀಡಲಾಗಿದೆ.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.10 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು.



