ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪದ ಕುರಿತು ಎಫ್ ಐ ಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜನಪ್ರತಿನಿಧಿಗಳ ನ್ಯಾಯಾಲಯ ಆದೇಶದಂತೆ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ತಿಲಕ್ ನಗರ ಠಾಣೆಗೆ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಟೀಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ಜೊತೆಗೆ ಇನ್ನಿತರರಿಗೂ ಬಿಗ್ ರಿಲೀಫ್ ಸಿಕ್ಕಿದೆ. ನಳಿನ್ ಕುಮಾರ್ ಕಟೀಲು ಪರ ಕೆ.ಜಿ.ರಾಘವನ್ ವಾದ ಮಂಡನೆ ಮಾಡಿ, ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಆರೋಪ ಬರುವುದಿಲ್ಲ. ಜಾರಿ ನಿರ್ದೇಶನಾಲಯವನ್ನೂ ಆರೋಪಿಯನ್ನಾಗಿ ಎಫ್ ಐಆರ್ ದಾಖಲಿಸಲಾಗಿದೆ ಎಂದರು.
ಇನ್ನು ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ ಭೂಷಣ್ ವಾದ ಮಂಡಿಸಿದ್ದು, ಇಡಿ ಭಯದಲ್ಲಿ ರಾಜಕೀಯ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ. ಇದು ಸುಲಿಗೆ ಅಲ್ಲದೇ ಮತ್ತೇನೂ ಅಲ್ಲ ಎಂದರು.
ಇದಕ್ಕೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಸುಲಿಗೆ ಎಂದರೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರಬೇಕು. ಸುಲಿಗೆಗೆ ಒಳಗಾದವರೇ ಪೊಲೀಸರಿಗೆ ದೂರು ನೀಡಬೇಕು. ಆದರೆ ದೂರುದಾರ ತಾವು ಸುಲಿಗೆಗೆ ಒಳಗಾಗಿದ್ದೇನೆಂದು ಹೇಳಿಲ್ಲ ಎಂದು ಅಭಿಪ್ರಾಯಪಟ್ಟು ಮಧ್ಯಂತರ ತಡೆಯಾಜ್ಞೆ ನೀಡಿದರು.
ಏನಿದು ಪ್ರಕರಣ?: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ದೂರು ದಾಖಲಿಸಿದ್ದರು.




