ಬೆಂಗಳೂರು: ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿರುವ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ಬಚಾವ್ ಆಗುವ ಯಾವುದೇ ಲಕ್ಷಣಗಳಿಲ್ಲ. ಬದಲಿಗೆ ಅವರು ಯಾವುದೇ ಕ್ಷಣದಲ್ಲೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಅವರೇ ಮೊದಲ ಆರೋಪಿಯಾಗಿದ್ದು, ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಜಾರಿನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡದೆ ಬೇರೆ ಗತ್ಯಂತರವಿಲ್ಲ ಎಂದರು.
ಕಳೆದ ಬಾರಿ ಹೂಬ್ಲೆಟ್ ವಾಚ್ ಪ್ರಕರಣದಲ್ಲಿ ಎಸಿಬಿ ಮೂಲಕ ರಕ್ಷಣೆ ಪಡೆದುಕೊಂಡ ಸಿದ್ದರಾಮಯ್ಯನವರು ಈ ಪ್ರಕರಣದಲ್ಲಿ ತಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಭಂಡನತ ತೋರದೆ ತಕ್ಷಣವೇ ರಾಜೀನಾಮೆ ನೀಡಬೇಕು. ಕಳೆದ ಬಾರಿ ನಾನು ಕೆಲವೇ ದಿನಗಳಲ್ಲಿ ರಾಜೀನಾಮೆ ಕೊಡುತ್ತಾರೆ ಎಂದಿದ್ದೆ. ಪರಿಸ್ಥಿತಿ ಈಗ ಕೆಲವೇ ಸಮಯಕ್ಕೆ ಬಂದು ನಿಂತಿದೆ ಎಂದರು.
ನೀವು ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದೀರಿ. 14 ನಿವೇಶನಗಳನ್ನು ವಾಪಸ್ ಕೊಟ್ಟರೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ನಿಮ್ಮ ಹಾಗೂ ಕುಟುಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರಲ್ಲೂ ಮೊದಲ ಆರೋಪಿ ನೀವು. ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೀರಿ ಎಂದರು.
ಕಾನೂನು ಬಾಹಿರವಾಗಿ ಸೈಟ್ ಗಳನ್ನು ಪಡೆದುಕೊಂಡಿದ್ದರಿಂದ ವಿಧಿಯಿಲ್ಲದೆ ವಾಪಸ್ ಕೊಟ್ಟಿರಬಹುದು. ಆಮಾತ್ರಕ್ಕೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ಆರೋಪಿ ಆರೋಪಿಯೇ ನಾವು ಪ್ರಕರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಿದ ಪರಿಣಾಮ ಇಂದು ತನಿಖಾ ಹಂತಕ್ಕೆ ಬಂದಿದೆ. ಮುಂದಿನ ದಿನಗಳಲ್ಲೂ ಸರ್ಕಾರದ ವಿರುದ್ದ ಹೋರಾಟ ಮುಂದುವರೆಯಲಿದೆ ಎಂದರು.




