ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್
ಬೆಂಗಳೂರು/ಬಳ್ಳಾರಿ: 25ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2024 ವತಿಯಿಂದ ಅ.05 ಮತ್ತು 06 ರಂದು ಬೆಂಗಳೂರಿನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಬಳ್ಳಾರಿಯ ರಜನಿ ಲಕ್ಕ ಅವರು ಆರು ಚಿನ್ನ, ಒಂದು ಬೆಳ್ಳಿ ಪದಕ ಸೇರಿ 7 ಪದಕಗಳನ್ನು ಗೆದ್ದು ಮುಡಿಗೇರಿಸಿಕೊಂಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2024 ವತಿಯಿಂದ ಆಯೋಜಿಸಿದ್ದ ವಿವಿಧ ಈಜು ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸ್ಫರ್ಧಾಳುಗಳು ಭಾಗವಹಿಸಿದ್ದರು. ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ ರಜನಿ ಲಕ್ಕ ಆಯ್ಕೆಯಾಗಿದ್ದರು.
ಅವರು, ಈಜು ಸ್ಪರ್ಧೆಯಲ್ಲಿ 100 ಮೀ. ಬ್ಯಾಕ್ ಸ್ಟ್ರೋಕ್, 200 ಮೀ. ಐಎಂ, 50 ಮೀ. ಫ್ರೀ ಸ್ಟೈಲ್, 50 ಮೀ. ಬಟ್ಟರ್ ಫ್ಲೈ, 4*50 ಫ್ರೀ ರಿಲೇ ವಿಭಾಗಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದುಕೊಂಡು 6 ಚಿನ್ನ, 1 ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರ ತಮ್ಮದಾಗಿಸಿಕೊಂಡಿದ್ದಾರೆ.
ರಜನಿ ಲಕ್ಕ ಅವರು, ರಾಜ್ಯ ಮಟ್ಟದ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ 100ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದಾರೆ.
ನವೆಂಬರ್ 10 ರಿಂದ 12 ರ ವರೆಗೆ ಭೂಪಾಲ್ನಲ್ಲಿ ನಡೆಯುವ ರಾಷ್ಟ್ರಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2024 ಗೆ ಆಯ್ಕೆಯಾಗಿದ್ದು, ಅಲ್ಲಿ ನಡೆಯುವ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಝುಬೇರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅಭಿನಂದಿಸಿದ್ದಾರೆ.




