ಬೆಂಗಳೂರು: ಅಹಿಂದ ಸಮುದಾಯಕ್ಕೆ ಭಾರಿ ಕೊಡುಗೆ ನೀಡಿದ್ದೇನೆ ಎಂದು ಪ್ರಚಾರ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಮುದಾಯಕ್ಕೆ ನೀಡಿರುವ ಕೊಡುಗೆಯ ಬಗ್ಗೆ ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರುವಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಕೈಗೊಂಡ ಯೋಜನೆಗಳು ಹಾಗೂ ಈಗ ಸಿದ್ದರಾಮಯ್ಯ ಎರಡು ಅವಧಿಯಲ್ಲಿ ಮಾಡಿದ ಯೋಜನೆಗಳ ಕುರಿತಂತೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ದ ಎಂದರು.
ಮುಖ್ಯಮಂತ್ರಿಗಳು ಮಾತು ಮಾತಿಗೂ ಹೊಟ್ಟೆ ಉರಿ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಮನೆಯಲ್ಲಿ ಗೌರವದಿಂದ ಇದ್ದ ಅವರ ಪತ್ನಿಯನ್ನು ಹೊರಗೆ ತಂದವರೇ ಸಿದ್ದರಾಮಯ್ಯ, ಅವರ ನಡವಳಿಕೆಯಿಂದ ಅವರ ಪತ್ನಿ ಹೊರಗೆ ಬಂದಂತಾಗಿದೆ. ಸಿದ್ದರಾಮಯ್ಯ ತಪ್ಪು ಮಾಡಿ ಜನರ ಮುಂದೆ ಸುಳ್ಳು ಹೇಳುವುದು ಸರಿಯಲ್ಲ ಎಂದರು.
ಹಿಂದುಳಿದ ವರ್ಗಕ್ಕೆ ಸೇರಿದ ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಕ್ಕೆ ಹೊಟ್ಟೆ ಉರಿಯಿಂದ ಬಿಜೆಪಿ-ಜೆಡಿಎಸ್ ನಾಯಕರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯ, ಅಹಿಂದ ವರ್ಗಗಳಿಗೆ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲೆಸೆದರು.
ಅಹಿಂದ ವರ್ಗಗಳ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಲೂಟಿ ಹೊಡೆದಿರುವುದನ್ನು ನೋಡಿದ್ದೆವಲ್ಲಾ ಎಂದರು.
ಮುಖ್ಯಮಂತ್ರಿಯಾಗಿ ನಾನು 14 ತಿಂಗಳು ಮಾಡಿದ ಕೆಲಸ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಇದುವರೆಗೂ ಏನು ಮಾಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದರು.
ಮುಖ್ಯಮಂತ್ರಿಗಳು ಮಾತು ಮಾತಿಗೂ ಹೊಟ್ಟೆ ಉರಿ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಮನೆಯಲ್ಲಿ ಗೌರವದಿಂದ ಇದ್ದ ಅವರ ಪತ್ನಿಯನ್ನು ಹೊರಗೆ ತಂದವರೇ ಸಿದ್ದರಾಮಯ್ಯ, ಅವರ ನಡವಳಿಕೆಯಿಂದ ಅವರ ಪತ್ನಿ ಹೊರಗೆ ಬಂದಂತಾಗಿದೆ. ಸಿದ್ದರಾಮಯ್ಯ ತಪ್ಪು ಮಾಡಿ ಜನರ ಮುಂದೆ ಸುಳ್ಳು ಹೇಳುವುದು ಸರಿಯಲ್ಲ ಎಂದರು.




