ಶಿವಮೊಗ್ಗ ನವಿಲೆಯಲ್ಲಿ ಕೃಷಿ, ತೋಟಗಾರಿಕೆ ಮೇಳ

2 years ago

ಶಿವಮೊಗ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.

ಕೃಷಿ-ತೋಟಗಾರಿಕೆ ಮೇಳವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡುವರು. ಈ ಮೇಳದಲ್ಲಿ ನೂತನ ಕೃಷಿ ಪದ್ಧತಿ, ವಿವಿಧ ತಳಿಗಳ ಪರಿಚಯ, ಕೃಷಿಯಲ್ಲಿ ಆಧುನಿಕತೆ ಸೇರಿದಂತೆ ವಸ್ತುಪ್ರದರ್ಶನ ಮತ್ತು ಮಾಹಿತಿಯನ್ನು ನೀಡಲಾಗುತ್ತದೆ. ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಿ ಇದರ ಲಾಭ ಪಡೆಯಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply