ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನೂ ಕೆಲವು ದಿನಗಳ ಕಾಲ ಜೈಲಿನಲ್ಲೇ ಇರಬೇಕಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಗೆ ನಿರಾಶೆಯಾಗಿದೆ. ಇವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದರು. ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.




