ಬೆಂಗಳೂರು: ಮನೆಯ ನೆಲಮಹಡಿಯ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿ ಕನ್ನ ಕಳವು ಮಾಡಿದ್ದ ಇಬ್ಬರು ಖತರ್ನಾಕ್ ಕ್ಯಾಬ್ ಚಾಲಕರನ್ನು ಬಂಧಿಸಿರುವ ಬೆಂಗಳೂರಿನ ವಿವಿಪುರಂ ಠಾಣೆ ಪೊಲೀಸರು ಬಂಧಿತರಿಂದ 1.22 ಕೋಟಿ 78 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಕೊಲ್ಲಾಪುರದ ಕೇಶವ ಪಾಟೀಲ್ (32) ಹಾಗೂ ಸತಾರದ ನಿತಿನ್ ಉತ್ತಮ್ ಕಾಳೆ(31) ಎಂದು ಗುರುತಿಸಲಾಗಿದೆ.
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಬಂಧಿತ ಆರೋಪಿಗಳಿಂದ 1.22 ಕೋಟಿ 78 ಸಾವಿರ ಮೌಲ್ಯದ 1 ಕೆ.ಜಿ 570 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
ಚಾಮರಾಜಪೇಟೆಯ ವ್ಯಕ್ತಿಯೊಬ್ಬರು ಕಳೆದ ಸೆ.8 ರಂದು ವ್ಯವಹಾರದ ನಿಮಿತ್ತ ಕೇರಳಕ್ಕೆ ಹೋದರೆ, ಮನೆಯಲ್ಲಿದ್ದ ಪತ್ನಿ ಹಾಗೂ ತಂದೆಯವರು ಅದೇ ದಿನ ಮಗಳ ಮನೆಗೆ ಹೋಗಿದ್ದಾಗ ಮನೆಯ ಸೆಲ್ಲಾರ್ ಕಿಟಕಿಯ ಗ್ರಿಲ್ ಮುರಿದು ಪ್ರವೇಶಿಸಿ ಮನೆಯ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 2 ಕೆ.ಜಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿದ ಪ್ರಕರಣ ಇದಾಗಿತ್ತು.
ಈ ಸಂಬಂಧ ನೀಡಿದ ದೂರು ಆಧರಿಸಿ, ಪ್ರಕರಣವನ್ನು ದಾಖಲಿಸಿದ ವಿ.ವಿ.ಪುರಂ ಪೊಲೀಸರು ಪ್ರಕರಣ ದಾಖಲಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಖಚಿತ ಮಾಹಿತಿ ಕಲೆಹಾಕಿ ಹಿಂದೆ ಕಳವಾದ ಮನೆಯಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಸೆ.31ರಂದು ಮಹಾರಾಷ್ಟ್ರದ ಸತಾರ ಜಿಲ್ಲೆಯ ಗೋಂದಲಿ ಗ್ರಾಮದಲ್ಲಿ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.
ಬಂಧಿತರಲ್ಲಿ ಒಬ್ಬ ಜಕ್ಕೂರಿನಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಕಳವು ಮಾಡಿದ್ದ ಸುಮಾರು 652 ಗ್ರಾಂ ಚಿನ್ನದ ಆಭರಣಗಳು ಮತ್ತು ವಜ್ರದ ಆಭರಣಗಳನ್ನು ಬಚ್ಚಿಟ್ಟಿದ್ದು, ಅವುಗಳನ್ನು ಕೂಡ ಜಪ್ತಿ ಮಾಡಲಾಗಿದೆ. ಮತ್ತೊಬ್ಬ ಆರೋಪಿ ಮಹಾರಾಷ್ರ್ಟದ ನವಿ ಮುಂಬೈನಲ್ಲಿರುವ ಆತನ ಅಕ್ಕನ ಮನೆಯಲ್ಲಿ ಹಾಗೂ ಕೊಲ್ಲಾಪುರದಲ್ಲಿನ ಸೊಂಡೊಲಿ ಗ್ರಾಮದ ಸ್ನೇಹಿತನ ಮನೆಯಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಇಟ್ಟಿರುವುದಾಗಿ ತಿಳಿಸಿದ್ದು, ಅಲ್ಲಿಂದ ಸುಮಾರು 354 ಗ್ರಾಂ ಚಿನ್ನದ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಆರೋಪಿಗಳಿಬ್ಬರು ಕೆಲಸದ ವೇಳೆ ಪರಿಚಯವಾಗಿ ಸ್ನೇಹಿತರಾಗಿದ್ದು, ಹಣದಾಸೆಗೆ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ ಭರಮಪ್ಪ ಜಗಳಸರ್, ಎಸಿಪಿ ಶಾಮಿದ್ ಬಾಷಾ ನೇತೃತ್ವದಲ್ಲಿ, ವಿ.ವಿ.ಪುರಂ ಪೊಲೀಸ್ ಇನ್ಸ್ಪೆಕ್ಟರ್ ಟಿ.ಎಂ.ಧರ್ಮೇಂದ ಮತ್ತವರ ಸಿಬ್ಬಂದಿ ಕೈಗೊಂಡಿದ್ದು ತಂಡಕ್ಕೆ ನಗದು ಬಹುಮಾನವನ್ನು ಕಮೀಷನರ್ ಘೋಷಿಸಿದರು.



