ರಾಜಕೀಯ ಕಾರಣಕ್ಕೆ ಹುಬ್ಬಳ್ಳಿ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ: ರಾಮಲಿಂಗಾರೆಡ್ಡಿ

2 years ago

ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಪ್ರಕರಣಗಳನ್ನು ಹಿಂಪಡೆಯಲಾಗಿದೆ.

ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರು, ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದವರು, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ ನಡೆಸಿದವರು, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರು ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಇದರಲ್ಲಿ ಹಳೇ ಹುಬ್ಬಳ್ಳಿ ಪ್ರಕರಣವೂ ಒಂದು. ಇದನ್ನೂ ಸಹ ನಾವು ವಾಪಸ್ ಪಡೆದಿದ್ದೇವೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ.

ಬಿಜೆಪಿಯವರು 385 ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದರು. ಇದರಲ್ಲಿ 182 ಪ್ರಕರಣಗಳು ಕೋಮು ದ್ವೇಷ ಸೇರಿದಂತೆ ಅನೈತಿಕ ಪೊಲೀಸ್ ಗಿರಿ, ಪಬ್ ದಾಳಿ ಸೇರಿದಂತೆ ಈ ರೀತಿಯ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ.

ಇದರಿಂದ  ಸುಮಾರು 2 ಸಾವಿರಕ್ಕೂ ಹೆಚ್ಚು ಆರೋಪಿಗಳ ಮೇಲಿನ ಪ್ರಕರಣಗಳು ಇಲ್ಲವಾಗಿದೆ. 2022ರಲ್ಲಿ 62 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗುತ್ತದೆ.

ಸಿ.ಟಿ.ರವಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಹಾಲಪ್ಪ ಆಚಾರ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜೆ.ಸಿ ಮಾಧುಸ್ವಾಮಿ ಅವರು ಇದರ ಫಲಾನುಭವಿಗಳು.

ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ  ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು.

ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ.

ಸಿಆರ್ ಪಿಸಿ ಕಲಂ 321 ರಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್ ವಾಪಸ್ ಪಡೆಯಲು ಅವಕಾಶವಿದೆ.

ಕೋಮುದ್ವೇಷ ಹರಡುವಿಕೆ, ದ್ವೇಷ ಭಾಷಣ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವಂತಹ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಬಿಜೆಪಿ.

ರಾಜಕೀಯ ಕಾರಣಕ್ಕೆ ಹುಬ್ಬಳ್ಳಿ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ.

ಈ ಸುಳ್ಳಿನ ಸರಮಾಲೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯೂ ಸಹ ಸೇರಿಕೊಂಡು ಹತಾಶೆಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ.

– ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

Leave a Reply