ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಹಲವಾರು ಜಿಲ್ಲೆಗಳಲ್ಲಿ ಆಹಾರಧಾನ್ಯಗಳು, ಬೇಳೆ ಕಾಳುಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಫಸಲು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕಳೆದ ವರ್ಷ ಬರ ಪರಿಸ್ಥಿತಿ ಇದ್ದಾಗ ಸರಿಯಾದ ಸಮಯಕ್ಕೆ ಸಮೀಕ್ಷೆ ನಡೆಸದೆ, ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡಿದ್ದ @INCKarnataka ಸರ್ಕಾರ, ಈಗಲಾದರೂ ಸರಿಯಾದ ಸಮಯಕ್ಕೆ ಬೆಳೆಹಾನಿ ಸಮೀಕ್ಷೆ ನಡೆಸಿ ಸಕಾಲಕ್ಕೆ ಪರಿಹಾರ ರೈತರ ಕೈಸೇರುವಂತೆ ನೋಡಿಕೊಳ್ಳಬೇಕು.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,500ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಇನ್ನಷ್ಟು ರೈತರು ಪ್ರಾಣ ಕಳೆದುಕೊಳ್ಳುವ ಯೋಚನೆ ಮಾಡುವ ಮುನ್ನ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೃಷಿ ಸಚಿವ @NCheluvarayaS ಅವರನ್ನ ಒತ್ತಾಯಿಸುತ್ತೇನೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




