ಪ್ರಚಾರ, ಇತರೆ ಕಾರ್ಯಗಳಿಗೆ ಅನುಮತಿ ಕಡ್ಡಾಯ: ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ: ಸಂಡೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ರ್ಯಾ ಲಿ ನಡೆಸಲು, ಕಟ್ಟಡ ಬಳಕೆ, ವಾಹನ ಹಾಗೂ ಇನ್ನಿತರೆ ನಿಯಮಗಳಿಗೆ ಸುವಿಧಾ ತಂತ್ರಾಂಶ ಮೂಲಕ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸಂಡೂರು ವಿಧಾನಸಭೆ ಉಪಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಚುನಾವಣಾ ಆಯೋಗ ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ರಾಜಕೀಯ ಪಕ್ಷಗಳು ತಪ್ಪದೇ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು ಎಂದು ಸೂಚನೆ ನೀಡಿದರು.
ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಚಿನ್ಹೆಯ ವಾಹನ, ಫ್ಲೆಕ್ಸ್ ಹಾಗೂ ಇನ್ನಿತರೆ ರಾಜಕೀಯ ಸಂಬಂಧ ಬ್ಯಾನರ್ಗಳಿದ್ದಲ್ಲಿ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು, ಈ ಕುರಿತು ತಮ್ಮ ಪಕ್ಷದ ಮುಖಂಡರುಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಬೇಕು ಎಂದರು.
ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವುದರಿಂದ ರಾಜಕೀಯ ಪಕ್ಷದವರು ಯಾವುದೇ ರ್ಯಾ ಲಿ, ರಾಜಕೀಯ ಪಕ್ಷಗಳ ಸಭೆ ಸಮಾರಂಭ ಆಯೋಜಿಸುವುದಕ್ಕೆ ಅನುಮತಿ ಪಡೆಯಬೇಕು. ಇನ್ನುಳಿದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಸಭೆ-ಸಮಾರಂಭ ಆಯೋಜಿಸಲು ಅಡ್ಡಿಯಿಲ್ಲ. ಮುಖ್ಯವಾಗಿ ಇಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆಯ ಕಾರ್ಯಚಟುವಟಿಕೆ ಕುರಿತು ಯಾವುದೇ ರೀತಿಯ ಪ್ರಚಾರ ಮಾಡುವಂತಿಲ್ಲ ಎಂದರು.
ಸಂಡೂರು ಭಾಗದಲ್ಲಿ ಸಾಕಷ್ಟು ಕಾರ್ಖಾನೆ ಪ್ರದೇಶಗಳಿದ್ದು, ಮತದಾನ ಪ್ರಕ್ರಿಯೆಯಿಂದ ದೂರ ಉಳಿಯದಂತೆ ಪ್ರತಿಯೊಬ್ಬರಿಗೂ ಮತ ಚಲಾಯಿಸುವಂತೆ ಪ್ರೇರೇಪಿಸುವ ಕರ್ತವ್ಯ ಜಿಲ್ಲಾಡಳಿತ ನಿರ್ವಹಿಸುತ್ತದೆ. ಅದರಂತೆ ಪಕ್ಷದವರು ಮತ ಯಾಚಿಸಲು ಚುನಾವಣೆ ಆಯೋಗದ ನಿರ್ದೇಶನದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಸಂಡೂರು ವಿಧಾನಸಭೆ ಉಪಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕು ಎಂದು ಮನವಿಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಮಾತನಾಡಿ, ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷದ ಮುಖಂಡರುಗಳು ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು. ಕಳೆದ ಬಾರಿ ಚುನಾವಣೆಯಂತೆ ಪಾರದರ್ಶಕವಾಗಿ ನಡೆಸಲು ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಹಾಜರಿದ್ದರು.



