ಕೊಡಗು: ಕರ್ನಾಟಕದ ಜೀವನಾಡಿ ದಕ್ಷಿಣ ಭಾರತದ ಗಂಗೆ ಎಂದೇ ಪೂಜಿಸಿ ಆರಾಧಿಸುವ ಜೀವನದಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಕುಂಡಿಕೆಯಿಂದ ಧುಮ್ಮಿಕ್ಕುವ ಮೂಲಕ ಜೀವನದಿಯಾಗಿ ಹರಿಯಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಕಾವೇರಿ ಉಗಮಸ್ಥಾನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಗುರುವಾರ ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತು ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.
ಅಪರೂಪದ ಈ ಧಾರ್ಮಿಕ ಕೈಂಕರ್ಯಕ್ಕೆ ಮಂತ್ರಿಗಳು, ಶಾಸಕರು, ಹಿರಿಯ ಅಧಿಕಾರಿಗಳು ಸೇರಿದಂತೆ ನಾಡಿನ ಮೂಲೆಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಸಾಕ್ಷಿಯಾದರು. ಕಾವೇರಿ ಕುಂಡಿಕೆಯಿಂದ ಆವಿರ್ಭವಿಸುವ ಕ್ಷಣವನ್ನು ಆನಂದಿಸಿ ಸ್ನಾನ ಮಾಡಲು ಆಗಮಿಸಿದ್ದ ಭಕ್ತ ವೃಂದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.
ಕೊಡಗು ಮಾತ್ರವಲ್ಲದೇ ಹಲವು ಭಾಗದವರಿಗೆ ಕಾವೇರಿ ಆರಾಧ್ಯ ದೇವತೆ. ಕಾವೇರಿ ಮಾತೆಯಿಂದಲೇ ಬದುಕು ಕಟ್ಟಿಕೊಂಡಿರುವವರೂ ಈ ದಿನ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಕಾವೇರಿಯ ಪವಿತ್ರ ತೀರ್ಥವನ್ನು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್ ಗಳಲ್ಲಿ ತುಂಬಿಕೊಂಡು ತೆರಳಿದರು.




