ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದೂ ಕೂಡ ಜಾಮೀನು ಸಿಗಲಿಲ್ಲ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ ಎಂದು ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ವಿಚಾರಣೆ ನಡೆಸಿದರು. ದರ್ಶನ್ ಪರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ತಮ್ಮ ಕಕ್ಷಿದಾರರ “ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಬಳ್ಳಾರಿಯ ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ (ವಿಮ್ಸ್) ಸೋಮವಾರವಷ್ಟೇ (ಅ.21) ಎಂಆರ್‌ಐ ಸ್ಕ್ಯಾನ್ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವೆಂದು ತಿಳಿಸಿದ್ದಾರೆ. ಹೀಗಾಗಿ, ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಮೂರ್ತಿಗಳು, “ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ” ಎಂದು ಬಳ್ಳಾರಿಯ ಕೇಂದ್ರ ಕಾರಾಗೃಹದ ಅಧಿಕಾರಿಗೆ ನಿರ್ದೇಶಿಸಿದರು. ಜೊತೆಗೆ, ಆಕ್ಷೇಪಣೆ ಸಲ್ಲಿಸುವಂತೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದರು.




