ಬೆಂಗಳೂರು: ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರ, ಸಿಎಂ, ಡಿಸಿಎಂ, ಸಚಿವರುಗಳ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ದಿಕ್ಕು ತಪ್ಪಿಸುವುದನ್ನೇ ಚಾಳಿ ಮಾಡಿ ಕೊಂಡಿರುವ BJP Karnataka ಸುಳ್ಳೇ ತಮ್ಮ ಮನೆ ದೇವರು ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ ಎಂದು ಕೆಪಿಸಿಸಿ ಆರೋಪಿಸಿದೆ.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿರುವ ಕೆಪಿಸಿಸಿ, ಸಚಿವರಾದ N S Bose Raju ಅವರ ವಿರುದ್ಧ ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಹೈಕೋರ್ಟ್‌ನಲ್ಲಿ ರದ್ದುಗೊಂಡಿರುವ ಪ್ರಕರಣವನ್ನು ಎಳೆದು ತಂದು ಕೆಸರೆರೆಚುವ ಪ್ರಯತ್ನ ನಡೆಸುತ್ತಿರುವುದೇ ಇದಕ್ಕೆ ಸಾಕ್ಷಿ ಎಂದಿದೆ.
ಇದೇ ಮೊದಲ ಬಾರಿಗೆ ಸಚಿವರಾಗಿರುವ, 1999ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಬೋಸರಾಜು ಅವರು ಈ ಪ್ರಕರಣದಲ್ಲಿ 1987ರಲ್ಲಿ ಪ್ರಭಾವ ಬೀರಲು ಹೇಗೆ ಸಾಧ್ಯ? ಎಂದು ಕೆಪಿಸಿಸಿ ಪ್ರಶ್ನಿಸಿದೆ.
2023ರಲ್ಲೇ ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವ ಪ್ರಕರಣವನ್ನು ಪ್ರಸ್ತಾಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಸಚಿವರಾದ ಎನ್ ಎಸ್ ಬೋಸರಾಜು ಅವರ ತೇಜೋವಧೆಯ ಹುನ್ನಾರ. ರಾಜ್ಯದ ಜನರಿಂದ ತಿರಸ್ಕೃತಗೊಂಡ ಹತಾಶೆ, ಗ್ಯಾರಂಟಿ ಸರ್ಕಾರದ ಜನಪ್ರಿಯತೆಯನ್ನು ಸಹಿಸಲಾಗದ ಬಿಜೆಪಿ ದಿನಕ್ಕೊಂದು ಸುಳ್ಳು ಆರೋಪಗಳ ಮೂಲಕ ಜನಪರ ಕಾಂಗ್ರೆಸ್ ಸರ್ಕಾರಕ್ಕೆ ಕಳಂಕ ಅಂಟಿಸುವ ಅಸಾಧ್ಯ ಪ್ರಯತ್ನ ಮಾಡುತ್ತಿದೆ ಎಂದಿದೆ.
ಜೊತೆಗೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲದ, ಭ್ರಷ್ಟಾಚಾರದ ಪಿತಾಮಹರ ಯಾವುದೇ ಕುತಂತ್ರ, ಷಡ್ಯಂತ್ರಗಳಿಗೆ ನಾವು ಜಗ್ಗುವುದಿಲ್ಲ ಎಂದು KPCC ಹೇಳಿದೆ.




