ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ: ಆರ್ ಅಶೋಕ್

1 year ago

ಬೆಂಗಳೂರು: ಝಣ-ಝಣಾ ಕಾಂಚಾಣದಲ್ಲಿ | ಕಾಂಗ್ರೆಸ್ ಸರ್ಕಾರದಲ್ಲಿ | ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ | ನಾಳೆ ರಸ್ತೆಯೂ ಮಾಯ | ಎಲ್ಲಾ ಮಾಯಾ ನಾಳೆ ನಾವೂ ಮಾಯ |ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,  ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ @DKShivakumar ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ. ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ? ಎಂದಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಆಗ್ರಹಿಸಿದ್ದಾರೆ.

Leave a Reply