ಬೆಂಗಳೂರು: ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಇಸ್ಲಾಂ ಮತ್ತು ಮುಸ್ಲಿಮರ ಮಾನಹಾನಿ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಿದಾಯತ್ ಉಲ್ಲಾಖಾನ್, ಶಿವಾಜಿನಗರದ ಉಪಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಪ್ರಚೋದನೆ ನೀಡಿದ ಆರೋಪದಲ್ಲಿ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ಅವರು ಅಕ್ಟೋಬರ್ 15ರಂದು ವಿಜಯಪುರದಲ್ಲಿ ಅವಹೇಳನಕಾರಿ ಭಾಷೆ ಬಳಸಿ ಮಾತನಾಡಿದ್ದು, ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಅವರ ಭಾಷಣಗಳು ಇಸ್ಲಾಂ ಮತ್ತು ಅದರ ಅನುಯಾಯಿಗಳನ್ನು ನಿಂದಿಸುವಂತಿದ್ದು, ಭಯವನ್ನು ಹುಟ್ಟುಹಾಕುವಂತಿದೆ. ದ್ವೇಷವನ್ನು ಪ್ರಚೋದಿಸುವ ಮತ್ತು ಸಮಾಜದಲ್ಲಿ ಕೋಮು ಅಶಾಂತಿಯನ್ನು ಉಂಟುಮಾಡುವ ಸಂಘಟಿತ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.




