ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿ ಬಂಧನ

2 years ago

ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್‌ ಫೋನ್‌ ಇಟ್ಟು ಮಹಿಳೆಯರ ಖಾಸಗಿ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದ ಆರೋಪಿಯನ್ನು ಮಹಿಳಾ ಸಿಬ್ಬಂದಿಗಳೇ ರೆಡ್‌ ಹ್ಯಾಂಡ್‌ ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಘಟನೆಗೆ ಸಂಬಂಧಿಸಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಆಸ್ಪತ್ರೆಯ ನಿರ್ದೇಶಕರಿಗೆ ಸೂಚಿಸಿದ್ದರು.

ಆರೋಪಿ ಯಲ್ಲಾಲಿಂಗ ಅವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ದೂರು ದಾಖಲಾದ ಬಳಿಕ ಸಂಸ್ಥೆಯ ಪೋಷ್ ಸಮಿತಿ ಎದುರು ಅವರನ್ನು ವಿಚಾರಣೆಗೆ ಒಳಪಡಿಸಿ, ಅಮಾನತು ಮಾಡಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಆರೋಪಿಯನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ‘ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

Leave a Reply