ಬಳ್ಳಾರಿ: ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಜಿಲ್ಲೆಯ 4 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ರೂಪನಗುಡಿ, ಕಂಪ್ಲಿ ತಾಲ್ಲೂಕಿನ ರಾಮಸಾಗರ ಮತ್ತು ಸಿರುಗುಪ್ಪ ತಾಲ್ಲೂಕಿನ ಕೆ.ಸುಗೂರು, ಕೆಂಚನಗುಡ್ಡ ಗ್ರಾಮ ಪಂಚಾಯತಿ.
ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 15.




